ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ಬಿಜೆಪಿಯಿಂದ ಖಂಡನಾ ಸಭೆ
ಉಡುಪಿ, ಮೇ 2: ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಛೇರಿಯ ಬಳಿ ಖಂಡನಾ ಮತ್ತು ಸಂತಾಪ ಸಭೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಸಭೆಯನ್ನುದ್ದೇಶಿಸಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿದರು. .
ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡರಾದ ಶ್ರೀಶ ನಾಯಕ್, ಮಹಾವೀರ ಹೆಗ್ಡೆ, ರೇಷ್ಮಾ ಉದಯ ಶೆಟ್ಟಿ, ದಿನಕರ ಬಾಬು, ಶಿಲ್ಪಾಜಿ. ಸುವರ್ಣ, ವಿಖ್ಯಾತ್ ಶೆಟ್ಟಿ, ಮನೋಹರ್ ಎಸ್.ಕಲ್ಮಾಡಿ, ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಸತ್ಯಾನಂದ ನಾಯಕ್, ಶಿವ ಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಗಿರೀಶ್ ಅಂಚನ್, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಂಧ್ಯಾ ರಮೇಶ್, ವಿಜಯ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.