×
Ad

ಉಡುಪಿ ನಗರಸಭೆಯ ಪೌರ ಕಾರ್ಮಿಕರಿಗೆ ಗೌರವ

Update: 2025-05-04 20:28 IST

ಉಡುಪಿ, ಮೇ 4: ಉಡುಪಿ ಸಿವಿಲ್ ಇಂಜಿನಿಯರ್ಸ್‌ ಅಸೋಸಿಯೇಷನ್ ವತಿಯಿಂದ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಉಡುಪಿ ನಗರಸಭೆ ದೈನಂದಿನ ನಗರ ಸ್ವಚ್ಛತಾ ಕಾರ್ಯ ಮಾಡುತ್ತಿರುವ ಹಿರಿಯ ಪೌರಕಾರ್ಮಿಕರನ್ನು ಗುರುತಿಸಿ ಗೌರವಿಸಲಾಯಿತು.

ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಪೌರಾಯುಕ್ತ ಉದಯ ಶೆಟ್ಟಿ, ಆರೋಗ್ಯ ಅಧಿಕಾರಿ ಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ದಿನಸಿ ಕಿಟ್‌ಗಳನ್ನು ವಿತರಸಿ, ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಮನವಿ ಮಾಡಲಾಯಿತು

ಸಂಸ್ಥೆಯ ಅಧ್ಯಕ್ಷ ಕೆ.ರಂಜನ್ ಸ್ವಾಗತಿಸಿದರು. ಲಕ್ಷ್ಮೀ ನಾರಾಯಣ ಉಪಾಧ್ಯ, ಹರೀಶ್ ಕುಮಾರ್, ಆರೋಗ್ಯ ಅಧಿಕಾರಿ ಪ್ರಕಾಶ್, ಸಂಘದ ಸದಸ್ಯರು, ನಗರ ಸಭೆಯ ಅಧಿಕಾರಿಗಳ, ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News