×
Ad

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆರೋಪ: ನಾಲ್ವರ ಬಂಧನ

Update: 2025-05-06 21:49 IST

ಕೋಟ, ಮೇ 6: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ಕೋಟ ಪೊಲೀಸರು ನಾಲ್ವರು ಆರೋಪಿಗಳನ್ನು ಮೇ 5ರಂದು ತೆಕ್ಕಟ್ಟೆ ಗ್ರಾಮದ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಬಂಧಿಸಿದ್ದಾರೆ.

ಕಿರಣ್, ಶಾಂತರಾಮ, ಅಜಿತ್, ವಿವೇಕ ಬಂಧಿತ ಆರೋಪಿಗಳು. ಇವರಿಂದ ಬೆಟ್ಟಿಂಗ್‌ಗೆ ಬಳಸಿದ 2 ಮೊಬೈಲ್ ಪೋನ್ ಹಾಗೂ 4,000ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಕೆಲಮಂದಿ ಯುವಕರು ಜೊತೆಯಾಗಿ ಸೇರಿಕೊಂಡು ಹೈದರಬಾದ್ ಮತ್ತು ಡೆಲ್ಲಿ ತಂಡಗಳ ನಡುವೆ ನಡೆಯುವ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಸಾವರ್ಜನಿಕರಿಂದ ಹಣ ಸಂಗ್ರಹ ಮಾಡುತ್ತ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮೊಬೈಲ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News