ಆರೋಗ್ಯ ಮಾಹಿತಿ- ತಪಾಸಣೆ ಕಾರ್ಯಕ್ರಮ
ಕುಂದಾಪುರ, ಮೇ 8: ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಆರೋಗ್ಯ ಮಾಹಿತಿ, ತಪಾಸಣೆ ಹಾಗೂ ಮಾನವೀಯ ಸಂಬಂಧಗಳ ಬಗ್ಗೆ ತರಬೇತಿ ಕಾರ್ಯಕ್ರಮ ಕುಂದಾಪುರ ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿತು.
ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರ ಹಾಗೂ ಪರಿಸರದ ಬಗ್ಗೆ ಕಾಳಜಿ ವಹಿಸಿ ಸ್ವಚ್ಛ ಕುಂದಾಪುರಕ್ಕೆ ಸಹಕರಿಸುತ್ತಿರುವ ಲಯನ್ಸ್ ಕ್ಲಬ್ ಅಮೃತದಾರ ಕುಂದಾಪುರ ಅಧ್ಯಕ್ಷೆ ಡಾ.ವಾಣಿಶ್ರೀ ಐತಾಳ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾರಿಸ್ ಕಾಲೇಜಿನ ಪ್ರಾಂಶುಪಾಲೆ ಸಬೀನಾ, ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ, ಖಜಾಂಚಿ ಶಿವರಾಮ ಶೆಟ್ಟಿ, ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ಯೂಸುಫ್ ಸಲೀಮ್, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕುಲಾಲ್ ಕಾರ್ಯದರ್ಶಿ ಕಿರಣ್ ದೇವಾಡಿಗ, ಯೂತ್ ರೆಡ್‌ಕ್ರಾಸ್ ಸಂಸ್ಥೆಯ ಮುಹಮ್ಮದ್ ಖಾಲಿದ್, ಜಾಸ್ಮಿನ್ ಫರ್ನಾಂಡಿಸ್ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿಗಳಾದ ಬುಶ್ರ ಅಂಜುಮ್ ಅತಿಥಿಗಳನ್ನು ಪರಿಚಯಿಸಿದರು. ಮಿಸ್ಬಾ ಕಾರ್ಯಕ್ರಮ ನಿರೂಪಿಸಿದರು.