×
Ad

ನಿಟ್ಟೆ ಕಾಲೇಜು ಹಾಸ್ಟೆಲ್‌ನ ಶೌಚಾಲಯದಲ್ಲಿ ಪ್ರಚೋದನಕಾರಿ ಬರಹ: ಪ್ರಕರಣ ದಾಖಲು

Update: 2025-05-09 19:26 IST

ಕಾರ್ಕಳ: ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಮಹಿಳಾ ವಸತಿ ನಿಲಯದ ಶೌಚಾಲಯದ ಒಳಗೆ ಪ್ರಚೋದನಕಾರಿ ಬರಹ ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೌಚಾಲಯದಲ್ಲಿ ಪೆನ್ನು ಪತ್ತೆಯಾಗಿದ್ದು, ಒಳಗಿನ ಗೋಡೆಯಲ್ಲಿ ಹಿಂದು ಹಾಗೂ ಮುಸ್ಲಿಮ್ ಧರ್ಮಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಬರೆಯಲಾಗಿದೆ. ಈ ಕುರಿತು ಅಪರಿಚಿತ ವಿದ್ಯಾರ್ಥಿನಿಯ ವಿರುದ್ಧ ಹಾಸ್ಟೆಲ್ ಮೆನೇಜರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News