ಮೆಹೆಂದಿ ಕಾರ್ಯಕ್ರಮದಲ್ಲಿ ಡಿಜೆ: ಪ್ರಕರಣ ದಾಖಲು
Update: 2025-05-09 21:04 IST
ಮಲ್ಪೆ: ಮೆಹೆಂದಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೆ ಡಿಜೆ ಸೌಂಡ್ ಬಳಸಿ, ಸಾರ್ವಜನಿಕರ ನೆಮ್ಮದಿಗೆ ಭಂಗ ವನ್ನುಂಟು ಮಾಡಿದ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಮಾಡಿಯ ರಂಜಿತ್ ಎಂಬವರ ಮನೆಯಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೆ ಡಿ.ಜೆ ಸೌಂಡ್ ಬಳಸಿದ್ದು, ಧ್ವನಿವರ್ಧಕ ಬಳಸಲು ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸುವ ಮೂಲಕ ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡಿದ ರಂಜಿತ್ ಹಾಗೂ ಸುಶಾನ್ ಸೌಂಡ್ ಸಿಸ್ಟಮ್ ಒದಗಿಸಿದ ಅದರ ಮಾಲಿಕ ಶಶಿಧರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.