×
Ad

ಬೆಳ್ಕಳೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Update: 2025-05-10 17:47 IST

ಉಡುಪಿ, ಮೇ 10: ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಇಂದು ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗುವಂತೆ ಬೆಳ್ಕಳೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ವಿಶೇಷ ಸಂಕಲ್ಪದೊಂದಿಗೆ ವಿಶೇಷ ಪೂಜೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಅನುವಂಶಿಕ ಮೊಕ್ತೇಸರ ಐತು ಎಂ.ಶೆಟ್ಟಿ, ಅರ್ಚಕ ಶ್ರೀಧರ ಭಟ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಶೋಭಾ ಡಿ.ನಾಯಕ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ ಅಂಚನ್, ಮಮತಾ ಶೆಟ್ಟಿ, ಅನುಶಾ ಆಚಾರ್ಯ, ಭಕ್ತವೃಂದದ ಅಧ್ಯಕ್ಷ ಉದಯ ಶೆಟ್ಟಿ, ಶಂಕರ್ ಶೆಟ್ಟಿ ಪಂಚಾಯತ್ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿ, ಮಂಜು ಆಚಾರ್ಯ, ಪ್ರಮುಖರಾದ ಧನಂಜಯ ಕುಂದರ್, ಸುರೇಶ್ ಕುಮಾರ್, ಶಿರಿಶ್ ಶೆಟ್ಟಿ, ಸೂರಜ್, ಗೋಪಾಲ್ ಗಾಣಿಗ, ಕೆಳಾರ್ಕಳಬೆಟ್ಟು ವೀರಮಾರುತಿ ವ್ಯಾಯಾಮ ಶಾಲೆಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News