×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2025-05-10 20:18 IST

ಬ್ರಹ್ಮಾವರ, ಮೇ 10: ವಿಪರೀತ ಕುಡಿತದ ಚಟ ಹೊಂದಿದ್ದ ಉಪ್ಪೂರು ನಿವಾಸಿ ಪುಷ್ಪಾ ಎಂಬವರ ಮಗ ಅನಿಲ್(42) ಎಂಬವರ ಜೀವನದಲ್ಲಿ ಜಿಗುಪ್ಸೆಗೊಂಡು ಮೇ 9ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ: ವಿಪರೀತ ಶರಾಬು ಕುಡಿಯುವ ಚಟ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗಂಗೊಳ್ಳಿ ಗ್ರಾಮದ ಗುಡ್ಡೇಕೇರಿಯ ನಿವಾಸಿ ಚಿಕ್ಕ ಎಂಬವರ ಮಗ ಜನಾರ್ದನ(35) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 9ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News