×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2025-05-11 21:31 IST

ಕುಂದಾಪುರ, ಮೇ 11: ಸಾಲ ತೀರಿಸಲು ಆಗದೇ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀಜಾಡಿ ಗ್ರಾಮದ ಕೃಷ್ಣ(67) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 10ರಂದು ರಾತ್ರಿ ವೇಳೆ ಮನೆಯ ಒಳಗಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಪರೀತ ಕುಡಿತದ ಚಟದಿಂದ ಉಂಟಾದ ಹೊಟ್ಟೆ ನೋವಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಬೇಳೂರು ಗ್ರಾಮದ ಮಂಜು(60) ಎಂಬವರು ಮೇ 10ರಂದು ರಾತ್ರಿ ಬಾವಿಗೆ ಕಟ್ಟಿದ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News