ಟೆಂಪೋ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2025-05-12 20:52 IST
ಕಾರ್ಕಳ, ಮೇ 12: ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಮಾಳ ಗ್ರಾಮದ ಮಂಜಲ್ತಾರ್ ಎಂಬಲ್ಲಿ ಮೇ 11ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ರಾಘವೇಂದ್ರ(40) ಎಂದು ಗುರುತಿಸಲಾಗಿದೆ.
ಮಾಳ ಚೌಕಿ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಟೆಂಪೋ ಅತೀ ವೇಗ ಹಾಗೂ ನಿರ್ಲಕ್ಷ್ಯತನ ದಿಂದ ಚಲಾಯಿಸಿಕೊಂಡು ಬಂದು ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ರಾಘವೇಂದ್ರ ಕಾರ್ಕಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.