×
Ad

ಭಗವಾನ್ ಬುದ್ಧ ಆತ್ಮ, ತತ್ವಗಳ ಬಗ್ಗೆ ಜಾಗೃತಿ ಮೂಡಿಸಿದವರು: ಶಾಸಕ ಯಶ್ಪಾಲ್ ಸುವರ್ಣ

Update: 2025-05-12 21:36 IST

ಉಡುಪಿ: ಭಗವಾನ್ ಬುದ್ಧರು ತಮ್ಮ ಜೀವನದಲ್ಲಿ ಅಳವಡಿಸಿ ಕೊಂಡಿದ್ದ ಆದರ್ಶ ಹಾಗೂ ತತ್ವಗಳನ್ನು ಅನುಸರಿಸುವುದರೊಂದಿಗೆ ಅವರ ಜೀವನ, ಆಚಾರ-ವಿಚಾರಗಳನ್ನು ದಿನನಿತ್ಯದ ಜೀವನದಲ್ಲಿ ಪಾಲಿಸ ಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದ್ದಾರೆ.

ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಜನತಾ ಸಭಾಭವನ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬುದ್ಧಿಸ್ಟ್ ಸೊಸೈಟಿ ಆಪ್ ಇಂಡಿಯಾ ಉಡುಪಿ ಇವರ ಸಂಯುಕ್ತ ಆಶ್ರಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಾನವತಾವಾದಿ ಸಂದೇಶವನ್ನು ಸಾರುವ ಮೂಲಕ ವಿಶ್ವದಲ್ಲೇ ಖ್ಯಾತಿ ಪಡೆದವರು ಭಗವಾನ್ ಬುದ್ಧರು. ಗೌತಮ ಬುದ್ದರ ಶಾಂತಿ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ನಮ್ಮ ಯುವ ಪೀಳಿಗೆ ಪಾಲಿಸುವಂತಾಗ ಬೇಕು ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಭಗವಾನ್ ಬುದ್ಧರು ಆತ್ಮ, ತತ್ವಗಳ ಬಗ್ಗೆ ಜಾಗೃತಿಯನ್ನು ಮೂಡಿಸಿದ ಮಹಾನ್ ವ್ಯಕ್ತಿ. ಅವರ ಜ್ಞಾನಮಾರ್ಗವನ್ನು ಅನುಸರಿಸಿ ನಮ್ಮೊಳಗೆ ಜಾಗೃತಿಯನ್ನು ಮೂಡಿಸಿಕೊಂಡು ಸಮಾಜ ಸುಧಾರಣೆ ಮಾಡು ವಲ್ಲಿ ಶ್ರಮಿಸಬೇಕು ಎಂದರು.

ಭಗವಾನ್ ಬುದ್ಧರ ಕುರಿತು ಮಾತನಾಡಿದ ನ್ಯಾಯವಾದಿ ಮಂಜುನಾಥ್, ಮೌಢ್ಯವನ್ನು ನಿರಾಕರಿಸಿ, ಸತ್ಯವನ್ನು ಅನುಸರಿಸುವ ಮೂಲಕ ನೇರವಾದ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಭೋದಿ ಸಿದ ಗೌತಮ ಬುದ್ದರು, ಸಮಾಜದಲ್ಲಿ ಶಾಂತಿ ಸಹಬಾಳ್ವೆಯ ಜೀವನ ನಿರ್ವಹಣೆ ತತ್ವವನ್ನು ಜಗತ್ತಿಗೆ ಸಾರಿದರು ಎಂದರು.

ಇದೇ ಸಂದರ್ಭ ಬುದ್ಧರ ಕುರಿತಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹು ಮಾನಗಳನ್ನು ನೀಡಿ ಗೌರವಿಸ ಲಾಯಿತು. ಬುದ್ಧಿಸ್ಟ್ ಸೊಸೈಟಿ ಆಪ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರೆ ಮಹೇಶ್ ಮಾರ್ಪಳ್ಳಿ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News