×
Ad

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ ನೀಡಿ ಆಮಂತ್ರಣ

Update: 2025-05-13 20:10 IST

ಉಡುಪಿ, ಮೇ 13: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರು ಶ್ರೀಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ಮೇ 17ರಂದು ನಡೆಯಲಿರುವ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಯಕ್ಷಗಾನ ವಿದ್ವಾಂಸ ಪ್ರೊ. ಎಂ.ಎಲ್ ಸಾಮಗ ರವರ ಮನೆಗೆ ತೆರಳಿ ವೀಳ್ಯದೊಂದಿಗೆ ಆಮಂತ್ರಣ ಪತ್ರ ನೀಡುವ ಸಂಪ್ರದಾಯದ ಕಾರ್ಯಕ್ರಮ ಸೋಮವಾರ ನಡೆಯಿತು.

ಈ ಸಂದರ್ಭದಲ್ಲಿ ಪತ್ನಿ, ಕಲಾವಿದೆ ಪ್ರತಿಭಾ ಸಾಮಗ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಾಧು ಸಾಲಿಯಾನ್, ಹಿರಿಯರಾದ ಭುವನ ಪ್ರಸಾದ್ ಹೆಗ್ಡೆ, ಕೊಡವೂರು ದೇವಳದ ಆಡಳಿತ ಮಂಡಳಿ ಸದಸ್ಯ ವಾದಿರಾಜ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ವಿಶ್ವನಾಥ ಶೆಣೈ, ವಿದ್ಯಾ ಶಾಮಸುಂದರ್, ಕಸಾಪ ಪದಾಧಿಕಾರಿಗಳಾದ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ಅನಿತಾ ಸಿಕ್ವೇರಾ, ವಸಂತ್, ರಾಜೇಶ್ ಭಟ್ ಪಣಿಯಾಡಿ, ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ, ಸಾಹಿತಿ ಡಾ.ಕಾತ್ಯಾಯನಿ ಕುಂಜಿಬೆಟ್ಟು, ಲಕ್ಷ್ಮೀನಾರಾಯಣ ಉಪಾಧ್ಯ, ಸುಶಾಂತ್ ಕೆರೆಮಠ ಉಪಸ್ಥಿತರಿದ್ದರು.

ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News