×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2025-05-13 20:18 IST

ಕಾರ್ಕಳ, ಮೇ 13: ಅನಾರೋಗ್ಯದಿಂದ ಬಳಲುತ್ತಿದ್ದ ದುರ್ಗಾ ಗ್ರಾಮದ ಬೇಬಿ(75) ಎಂಬವರು ಮನ ನೊಂದು ಮೇ 12ರಂದು ಸಂಜೆ ವೇಳೆ ಮನೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ: ವಿಪರೀತ ಕುಡಿತದ ಅಭ್ಯಾಸ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಜೂರು ಗ್ರಾಮದ ಉಮೇಶ್(36) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 12ರಂದು ಸಂಜೆ ವೇಳೆ ಮನೆಯ ಸಮೀಪ ಇರುವ ಮೋರಿಯ ಅಡಿಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News