×
Ad

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಣಕು ಪ್ರದರ್ಶನ

Update: 2025-05-14 17:55 IST

ಮಲ್ಪೆ, ಮೇ 14: ಭಾರತ ಪಾಕಿಸ್ತಾನ ಯುದ್ದ ಭೀತಿಯ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮಂಗಳವಾರ ಅಣಕು ಕಾರ್ಯಾಚರಣೆ ನಡೆಸಲಾಯಿತು.

ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಅಣುಕು ಕಾರ್ಯಾಚರಣೆ ಮಾಡಲಾಯಿತು. ಅನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.

ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿ ಶಸ್ತ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್‌ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ನೀಡಲಾಗಿದೆ. ಮೀನುಗಾರರು 3 ಬೋಟ್‌ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಕರಾವಳಿ ಕಾವಲು ಪೊಲೀಸ್ ಎಸ್ಪಿ ಮಿಥುನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News