×
Ad

ಉಡುಪಿಯಲ್ಲಿ ಐದು ದಿನಗಳ ಮಾವು ಮೇಳಕ್ಕೆ ಚಾಲನೆ

Update: 2025-05-14 19:54 IST

ಉಡುಪಿ: ಸೀಕೋ ಮತ್ತು ಯು.ಬಿ.ಫ್ರೂಟ್ಸ್ ಮಂಗಳೂರು ಇವರ ಆಶ್ರಯದಲ್ಲಿ ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ರೈತಾ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಐದು ದಿನಗಳ ಮಾವು ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ನಿಧೀಶ್ ಕೆ.ಜೆ., ಗುರುಪ್ರಸಾದ್ ಮಾತನಾಡಿದರು.

ಸೀಕೋ ಮತ್ತು ಯು.ಬಿ.ಫ್ರೂಟ್ಸ್ ಪಾಲುದಾರ ಅಬ್ದುಲ್ ಕುಂಞಿ, ಸಿದ್ದೀಕ್ ಮೊದಲಾದವರು ಉಪಸ್ಥಿತರಿದ್ದರು. ಮ್ಯಾನೇಜರ್ ಮುಹಮ್ಮದ್ ಹ್ಯಾರೀಸ್ ಕುದ್ರೋಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಮೇ 18ರವರೆಗೆ ನಡೆಯುವ ಮಾವು ಮೇಳದಲ್ಲಿ ವಿವಿಧ ಮಾವು ತಳಿಗಳ ಪ್ರದರ್ಶನ ಹಾಗೂ ಮಾರಾ ಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯವಾಗಿ ಬೆಳೆಯುವ ಮಾವಿನ ತಳಿಗಳಾದ ಬನೆಡ್, ಅಪುಸ್, ಮುಂಡಪ್ಪ, ಕದ್ರಿ, ಪೈರಿ, ಕಳಕ್ಟರ್, ಕಾಲಪ್ಪಾಡಿ ಲಭ್ಯವಿದೆ. ರಾಜ್ಯದ ವಿವಿಧ ಸ್ಥಳಗಳಲ್ಲಿ ಬೆಳೆಯುವ ತಳಿಗಳಾದ ಮಲ್ಲಿಕ, ಮಲಗೋವಾ, ನೀಲಂ, ಸಿಂಧೂರ, ಬಂಗನಪಲ್ಲಿ, ಕೇಸರಿ, ದಶಹರಿ ಮತ್ತು ಶುಗರ್ ಬೇಬಿ ಸಹಿತ ಹಲವು ರುಚಿಕರ ಮತ್ತು ಜನರು ಅತೀ ಹೆಚ್ಚು ಇಷ್ಟ ಪಡುವ ಆರೋಗ್ಯಕರ ಮಾವುಗಳು ಈ ಮೇಳದಲ್ಲಿ ಸಾರ್ವಜನಿಕರಿಗೆ ಖರೀದಿಸಲು ಲಭ್ಯ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News