ಬೈಕ್ ಢಿಕ್ಕಿ: ಸೈಕಲ್ ಸವಾರ ಮೃತ್ಯು
Update: 2025-05-14 21:05 IST
ಶಂಕರನಾರಾಯಣ, ಮೇ 14: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಮೇ 13ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕೊರಗ(77) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪವನ್ ಸಣ್ಣಪುಟ್ಟ ಗಾಯಗೊಂಡಿ ದ್ದಾರೆ. ಅಂಪಾರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್, ಮಣ್ಣು ರಸ್ತೆಯಲ್ಲಿ ಹೋಗುತ್ತಿದ್ದ ಸೈಕಲ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಹಾಗೂ ಸೈಕಲ್ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡರು.
ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೊರಗ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.