×
Ad

ಮಲ್ಪೆ-ಆದಿಉಡುಪಿ ಹೆದ್ದಾರಿ ಕಾಮಗಾರಿ: ಅಧಿಕಾರಿಗಳೊಂದಿಗೆ ಶಾಸಕರ ಸಭೆ

Update: 2025-05-15 19:38 IST

ಉಡುಪಿ, ಮೇ 15: ಮಲ್ಪೆ- ಆದಿಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.

ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಆದಿ ಉಡುಪಿವರೆಗೆ ಕಟ್ಟಡಗಳನ್ನು ತೆರವು ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳ ನೀಡಿದವರಿಗೆ ಇರುವ ಪರಿಹಾರ ಮೊತ್ತವನ್ನು ತಕ್ಷಣ ಒದಗಿಸಲು ಹಾಗೂ ಈಗಾಗಲೇ ಕಾಮಗಾರಿ ಗಾಗಿ ತೆರವುಗೊಳಿಸಿರುವ ಸರಕಾರಿ ಶಾಲಾ ಆವರಣ ಗೋಡೆಯನ್ನು ಮರು ನಿರ್ಮಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮಳೆಗಾಲ ಸಂದರ್ಭದಲ್ಲಿ ಮೀನುಗಾರಿಕಾ ಚಟುವಟಿಕೆ ಹಾಗೂ ಪ್ರವಾಸಿಗರ ದಟ್ಟಣೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ವೇಗ ನೀಡಬೇಕು ಎಂದು ಶಾಸಕರು ಸೂಚಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ತಹಶೀಲ್ದಾರ್ ಗುರುರಾಜ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್, ಸುಂದರ ಕಲ್ಮಾಡಿ, ಶ್ರೀಶ ಕೊಡವೂರು, ಸವಿತಾ ಹರೀಶ್ ರಾಮ್, ಎಡ್ಲಿನ್ ಕರ್ಕಡ, ಮಲ್ಪೆಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News