×
Ad

ಯುವನಿಧಿ ನೋಂದಣಿ, ಪ್ರಚಾರ ಅಭಿಯಾನ ಕಾರ್ಯಕ್ರಮ

Update: 2025-05-16 18:29 IST

ಕುಂದಾಪುರ, ಮೇ 16: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನವನ್ನು ಕೋಟೇಶ್ವರದಲ್ಲಿರುವ ಕಾಳಾವರ ವರದರಾಜ್ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮಾತನಾಡಿ, ಸರಕಾರದ ಯುವನಿಧಿ ಯೋಜನೆ ನಿರುದ್ಯೋಗಿ ಯುವಜನಾಂಗಕ್ಕೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ದೀಕ್ಷಿತ್ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗ್ಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು. ಕಾಲೇಜಿನ ಪ್ರಾಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯ ಝಾಹಿರ್ ಗಂಗೊಳ್ಳಿ, ಕಾಲೇಜಿನ ಉಪನ್ಯಾಸಕ ಡಾ.ಶೇಖರ್ ಬಿ., ಕಾರ್ತಿಕ್ ಪೈ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಪಕ ರಂಜಿತ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರಶ್ಮಿ ನಿರೂಪಿಸಿ, ಚೈತನ್ಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News