×
Ad

ಮಲ್ಪೆ-ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ| ಬಸ್ ನಿಲ್ದಾಣಗಳಿಲ್ಲದೆ ಸಮಸ್ಯೆ: ಶಾಸಕರಿಂದ ಪರಿಶೀಲನೆ

Update: 2025-05-16 19:04 IST

ಮಲ್ಪೆ, ಮೇ 16: ಮಲ್ಪೆ-ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆದ್ದಾರಿ ಕಾಮಗಾರಿಗಾಗಿ ತೆರವು ಮಾಡಲಾದ ಮಲ್ಪೆ ಫಿಶರೀಶ್ ಶಾಲೆಯ ಆವರಣ ಗೋಡೆಯನ್ನು ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಮರು ನಿರ್ಮಾಣ ಮಾಡುವಂತೆ ಶಾಸಕರು ರಾಷ್ಟೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲ್ಪೆಏಳೂರು ಮೊಗವೀರ ಭವನದ ಬಳಿ ಈ ಹಿಂದೆ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಿದ್ದ ಬಸ್ಸು ನಿಲ್ದಾಣವನ್ನು ತೆರವು ಮಾಡಿದ್ದು, ಈಗ ಯಾವುದೇ ಬಸ್ ನಿಲ್ದಾಣವಿಲ್ಲದೆ ಶಾಲಾ ವಿದ್ಯಾರ್ಥಿಗಳು, ಸಾರ್ವ ಜನಿಕರು ಬಿಸಿಲು ಗಾಳಿ ಮಳೆಗೆ ರಕ್ಷಣೆ ಇಲ್ಲದೆ ತೊಂದರೆ ಎದುರಿಸುತ್ತಿದ್ದು, ಬಾಕಿ ಉಳಿದಿರುವ ಮರವನ್ನು ತೆರವು ಮಾಡಿ ತಾತ್ಕಾಲಿಕ ಬಸ್ಸು ನಿಲ್ದಾಣ ಮಾಡುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಹಂತದಲ್ಲಿ ಕಟ್ಟಡಗಳ ತೆರವು ಸಂದರ್ಭದಲ್ಲಿ ಕಟ್ಟಡಗಳ ಮಾಲೀಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಹಕಾರ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಎಡ್ಲಿನ್ ಕರ್ಕಡ, ಶ್ರೀಶ ಕೊಡವೂರು, ಲಕ್ಷ್ಮೀ ಮಂಜುನಾಥ, ರಾಷ್ಟೀಯ ಹೆದ್ದಾರಿ ಇಲಾಖೆಯ ಮಂಜುನಾಥ ನಾಯಕ್, ಸ್ಥಳೀಯ ಮುಖಂಡರಾದ ಮಂಜು ಕೊಳ, ಸುರೇಶ್ ಕುಂದರ್, ಫೀಶರೀಶ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News