×
Ad

ಉಡುಪಿ ಜಿಲ್ಲಾ ಮಟ್ಟದ ಕಿಡ್ಸ್ ಮೀಟ್ ಉದ್ಘಾಟನೆ

Update: 2025-05-17 18:22 IST

ಉಡುಪಿ, ಮೇ 17: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಉಡುಪಿ ಜಿಲ್ಲಾಮಟ್ಟದ ಕಿಡ್ಸ್ ಮೀಟ್- 2025ನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನ ಗೌರವಾಧ್ಯಕ್ಷ ಡಾ.ಚಂದ್ರಶೇಖರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಅಸೋಸಿಯೇಶನ್ ಕಾರ್ಯದರ್ಶಿ ದಿನೇಶ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವರದರಾಜ್ ವಂದಿಸಿದರು. ಈ ಕ್ರೀಡಾಕೂಟ ದಲ್ಲಿ 8, 10, 12, 14ವರ್ಷದೊಳಗಿನ ವಯೋಮಿತಿಯ ವಿಭಾಗದಲ್ಲಿ ಒಟ್ಟು 180 ಮಕ್ಕಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News