ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಅಧ್ಯಕ್ಷೆಯಾಗಿ ಶ್ಯಾಮಲಾ ಭಂಡಾರಿ
ಉಡುಪಿ: ಕರ್ನಾಟಕ ರಾಜ್ಯ ನೋಟರಿಗಳ ಸಂಘದ 2025- 2026ನೇ ಸಾಲಿನ ರಾಜ್ಯಾಧ್ಯಕ್ಷರಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ನೋಟರಿ ಶ್ಯಾಮಲಾ ಭಂಡಾರಿ ಆಯ್ಕೆಯಾಗಿದ್ದಾರೆ.
ಇವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ, ರಾಜ್ಯ ಮಹಿಳಾ ಆಯೋಗದ ಸದಸ್ಯೆಯಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಲಹಾ ಸಮಿತಿಯ ಸದಸ್ಯೆಯಾಗಿ, ಕೇಂದ್ರ ಸಿನಿಮಾ ಸೆನ್ಸಾರ್ ಮಂಡಳಿಯ ಬೆಂಗಳೂರು ವಿಭಾಗದ ಸಲಹಾ ಸಮಿತಿಯ ಸದಸ್ಯೆಯಾಗಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯೆಯಾಗಿ ಯಡ್ತರೆ ಮಂಜಯ್ಯ ಶೆಟ್ಟಿ ಕಾನೂನು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕಿಯಾಗಿ, ಮಹಿಳಾ ಸಂಘ ಸಂಸ್ಥೆಗಳ ಕಾನೂನು ಸಲಹೆಗಾರರಾಗಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.
ಸಾಮಾಜಿಕ ಹೋರಾಟಗಳ ಮೂಲಕ ಗಮನ ಸೆಳೆದಿರುವ ಇವರು, ಪ್ರಸ್ತುತ ಕರ್ನಾಟಕ ರಾಜ್ಯ ನೋಟರಿ ಗಳ ಸಂಘದ ಪ್ರಥಮ ಮಹಿಳಾ ರಾಜ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.