ಬೈಕ್ ಢಿಕ್ಕಿ: ಸೈಕಲ್ ಸವಾರ ಮೃತ್ಯು
Update: 2025-05-17 20:51 IST
ಕುಂದಾಪುರ, ಮೇ 17: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಸೈಕಲ್ ತಳ್ಳಿಕೊಂಡು ಹೋಗು ತ್ತಿದ್ದ ಸವಾರರೊಬ್ಬರು ಮೃತಪಟ್ಟ ಘಟನೆ ಕೋಟೇಶ್ವರ ಗ್ರಾಮದ ಕಾಗೇರಿ ಎಂಎಸ್‌ಆರ್ ಕಾಂಪ್ಲೆಕ್ಸ್ ಹತ್ತಿರ ಮೇ 16ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಕೆ.ವೆಂಕಟರಮಣ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಬೈಕ್ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದು ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದ ಕೆ.ವೆಂಕಟ ರಮಣಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಸವಾರ ಬೈಕ್‌ನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ವೆಂಕಟರಮಣ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.