×
Ad

ಅಕ್ಟೋಬರ್‌ನಲ್ಲಿ ಕಟಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ: ಕೋಟ

Update: 2025-05-19 20:52 IST

ಕಾಪು, ಮೇ 19: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಈ ಸಂಬಂಧ ಇಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಚಾರವಾಗಿ ಸಂಸದರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು. ಈಗಾಗಲೇ ಉಡುಪಿಯ ಕಲ್ಯಾಣಪುರ ಸಂತೆಕಟ್ಟೆ ಬಳಿ ಓವರ್ ಪಾಸ್ ಕಾಮಗಾರಿ ಹಾಗೂ ಅಂಬಲಪಾಡಿ ಜಂಕ್ಷನ್ ಬಳಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಜೊತೆಗೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಕಟಪಾಡಿಯ ಓವರ್‌ಪಾಸ್ ಕಾಮಗಾರಿ ಆರಂಭಿಸುವುದಾಗಿ ಸಂಸದರು ತಿಳಿಸಿದರು.

ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಉಪಾಧ್ಯಕ್ಷೆ ಸುಗುಣಾ ಪೂಜಾರ್ತಿ, ಜಿಪಂ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾಜಿ.ಸುವರ್ಣ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಮಲ್ಲಿಕಾರ್ಜುನ, ನವೀನ್, ಕಟಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News