×
Ad

ಅಕ್ರಮ ಮರಳುಗಾರಿಕೆ ಆರೋಪ: ಓರ್ವನ ಬಂಧನ, ಸೊತ್ತು ವಶ

Update: 2025-06-01 20:54 IST

ಕುಂದಾಪುರ, ಜೂ.1: ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ರಿಂಗ್ ರೋಡ್ ಸಮೀಪದ ಪಂಚಗಂಗಾವಳಿ ಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಸಂಬಂಧ ಓರ್ವನನ್ನು ಕುಂದಾಪುರ ಪೊಲೀಸರು ಜೂ.1ರಂದು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.

ಹೊಳೆಯಲ್ಲಿ ಕೆಲವು ಜನರು ಮರಳನ್ನು ತೆಗೆದು ದೋಣಿಯಲ್ಲಿ ತುಂಬಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ನಿರೀಕ್ಷಕ ನಂಜಾ ನಾಯ್ಕ್ ಸ್ಥಳಕ್ಕೆ ದಾಳಿ ನಡೆಸಿ, ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ಸುನಿಲ್ ಎಂಬಾತನು ಓಡಿ ಹೋಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿತರು ಸಂಘಟಿತರಾಗಿ ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸಿರುವುದು ಕಂಡುಬಂದಿದ್ದು, ಸ್ಥಳದಲ್ಲಿದ್ದ ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ, ಮರಳು, ಟಿಪ್ಪರ್ ವಾಹನ ಸೇರಿದಂತೆ ಒಟ್ಟು 5,20,000ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News