×
Ad

ಮನೆಗೆ ನುಗ್ಗಿ ಸೊತ್ತು ಕಳವು: ಪ್ರಕರಣ ದಾಖಲು

Update: 2025-06-01 21:28 IST

ಮಣಿಪಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಹೆರ್ಗ ಎಂಬಲ್ಲಿ ಮೇ 30ರಂದು ಸಂಜೆ ವೇಳೆ ನಡೆದಿದೆ.

ಸ್ಥಳೀಯ ನಿವಾಸಿ ಎ.ಸುಬ್ಬಣ್ಣ ಮಂಗಳೂರಿಗೆ ಮಗನ ಮನೆಗೆ ಹೋಗಿದ್ದು ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರು ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಸುಮಾರು 55,100ರೂ. ಮೌಲ್ಯದ ಕಳವು ಮಾಡಿಕೊಂಡು ಹೋಗಿರುವುದಾಗಿ ದೂರ ಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News