ಎಸ್‌ಡಿಪಿಐಯಿಂದ ಸಾರ್ವಜನಿಕ ರಕ್ತದಾನ ಶಿಬಿರ
Update: 2025-06-02 21:09 IST
ಕಾಪು, ಜೂ.2: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಮಜೂರು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಅಧ್ಯಕ್ಷತೆಯನ್ನು ಎಸ್‌ಡಿಪಿಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಾಧಿಕ್ ಕೆ.ಪಿ. ವಹಿಸಿದ್ದರು. ಮುಖ್ಯ ಅತಿಥಿ ಯಾಗಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ವೀಣಾ ಕುಮಾರಿ ರಕ್ತದಾನದ ಮಹತ್ವವನ್ನು ತಿಳಿಸಿದರು.
ಎಸ್‌ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, ಮಲ್ಲಾರ್ ಟಿಐವೈಎ ಇದರ ಉಪಾಧ್ಯಕ್ಷ ಅಬ್ದುಲ್ ರಝಾಕ್, ಉದ್ಯಮಿ ರವಿ ಕರಂದಾಡಿ, ಸಮಾಜ ಸೇವಕ ಮುನೀರ್ ಕಲ್ಮಾಡಿ, ಕಾಪು ಪುರಸಭೆ ಸದಸ್ಯ ನೂರುದ್ದೀನ್, ಎಸ್‌ಡಿಪಿಐ ಮುಖಂಡ ಅಬೂಬಕ್ಕರ್ ಪಾದೂರ್, ಮಜೂರ್ ಪಂಚಾಯತ್ ಸಮಿತಿ ಅಧ್ಯಕ್ಷ ಶಂಶುದ್ದೀನ್ ಕರಂದಾಡಿ ಉಪಸ್ಥಿತರಿದ್ದರು. ಈ ಶಿಬಿರದಲ್ಲಿ ಸುಮಾರು 9 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.