×
Ad

ಸಮಾಜದಲ್ಲಿ ಶಾಂತಿ ಸ್ಥಾಪಿಸುವಂತೆ ಕಾಂಗ್ರೆಸ್ ನಿಯೋಗ ಎಸ್ಪಿಗೆ ಮನವಿ

Update: 2025-06-04 18:26 IST

ಉಡುಪಿ, ಜೂ.4: ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಇಂದು ಭೇಟಿಯಾಗಿ ಅಭಿನಂದಿಸಿತು.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಶಾಂತಿ ಹಬ್ಬಿಸುವವರ ವಿರುದ್ದ ಯಾವುದೇ ಜಾತಿ ಧರ್ಮ, ಪಕ್ಷ ಎಂಬ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮನವಿ ಮಾಡಿದರು. ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ಕಾಂಗ್ರೆಸ್ ಪಕ್ಷವು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ನಿಯೋಗ ತಿಳಿಸಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಡಾ.ಶಿವರಾಮ್ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ.ಗಣನಾಥ್ ಎಕ್ಕಾರು, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಾಬಲ ಕುಂದರ್ ಹಾಗೂ ಪ್ರಖ್ಯಾತ್ ಶೆಟ್ಟಿ, ಮುಖಂಡ ರಾದ ಗಣೇಶ್ ನೆರ್ಗಿ, ಸತೀಶ್ ನಾಯ್ಕ್, ಮಂಜುನಾಥ್ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ಸೌರಭ್ ಬಲ್ಲಾಳ್, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್‌ರಾಜ್, ಸತೀಶ್ ಕೊಡವೂರು, ಮೊಹಮ್ಮದ್, ಯತೀಶ್ ಕರ್ಕೇರ, ನಾರಾಯಣ್ ಕುಂದರ್, ಸಾಯಿರಾಜ್, ಸಂಜಯ್ ಆಚಾರ್ಯ, ಧನಪಾಲ್, ಶ್ರೇಯಸ್ ಶೆಟ್ಟಿ, ಸಿರಾಜ್, ಅರ್ಚನಾ ದೇವಾಡಿಗ, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News