×
Ad

ಕೋಟ| ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಇಬ್ಬರು ಆರೋಪಿಗಳ ಬಂಧನ

Update: 2025-06-04 19:54 IST

ಕೋಟ, ಜೂ.4: ಅಕ್ರಮ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂ.3ರಂದು ರಾತ್ರಿ 10ಗಂಟೆಗೆ ಸಾಬರಕಟ್ಟೆ ರಿಕ್ಷಾ ನಿಲ್ದಾಣದ ಸಮೀಪ ಬಂಧಿಸಿದ್ದಾರೆ.

ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಶಿವರಾಜ್ (32) ಹಾಗೂ ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ, ಶಿರಿಯಾರ ನಿವಾಸಿ ಪ್ರದೀಪ(37) ಬಂಧಿತ ಆರೋಪಿಗಳು.

ಇವರು ಮೊಬೈಲ್ ಫೋನ್ ಹಿಡಿದುಕೊಂಡು ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮೂಲಕ ಚಂದ್ರ ಜನ್ನಾಡಿ ಜೊತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಟ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಯಂತೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳು ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಿದ 3 ಮೊಬೈಲ್ ಫೋನ್‌ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News