ಸೇವೆ ಎಂಬುದು ಸಾಮಾಜಿಕ ಜವಾಬ್ದಾರಿ: ಡಾ.ನಿಕೇತನ
ಉಡುಪಿ, ಜೂ.4: ಸೇವೆ ಎಂಬುದು ಒಂದು ಸಾಮಾಜಿಕ ಜವಾಬ್ದಾರಿ. ನಾವು ಪ್ರತಿ ಕ್ಷಣವೂ ಏನ್ನನ್ನಾ ದರೂ ಸಮಾಜದಿಂದ ಪಡೆಯುತ್ತಿರುತ್ತೇವೆ. ಅದನ್ನು ಸೇವೆಗಳ ಮೂಲಕ ಸಮಾಜಕ್ಕೆ ಹಿಂದಿರುಗಿಸಬಹು ದಾಗಿದೆ. ಇಂತಹ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಲು ರೆಡ್‌ಕ್ರಾಸ್ ಶಿಬಿರಗಳು ಸಹಕಾರಿ ಎಂದು ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ಹೇಳಿದ್ದಾರೆ.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಶ್ರೀ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾರ್ಕಳ ಇವರ ಸಹಯೋಗದಲ್ಲಿ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆದ ರೆಡ್‌ಕ್ರಾಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡುತಿದ್ದರು.
ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಶಿಬಿರಾರ್ಥಿ ಗಳು ನಡೆಸಿದ ಸೇವಾ ಕಾರ್ಯವನ್ನು ಶ್ಲಾಘಿಸಿದರು.
ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಶಿಬಿರದಲ್ಲಿ ನಡೆದ ಚಟುವಟಿಕೆಗಳನ್ನು ವಿವರಿಸಿ ದರು. ಶಿಬಿರಾರ್ಥಿಗಳು ಶಿಬಿರದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಪ್ರಭು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿ, ರಚನಾ ವಂದಿಸಿದರು.