ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಎಸ್ಪಿಗೆ ಅಭಿನಂದನೆ
ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ನಿಯೋಗ ಬುಧವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿತು.
ಉಡುಪಿ ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಬೇಕು. ಜಿಲ್ಲೆಯ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ವಿಶೇಷ ಕಾಳಜಿ ವಹಿಸಬೇಕು. ಡ್ರಗ್ಸ್, ಗಾಂಜಾ ದಂಧೆಯ ವಿರುದ್ಧ ಸೂಕ್ತ ಕಾರ್ಯಾಚರಣೆ ನಡೆಸಿ ಕಟ್ಟುನಿಟ್ಟಿನ ಕ್ರಮ ಜರಗಿಸಬೇಕು ಎಂದು ನಿಯೋಗ ಮನವಿ ಮಾಡಿತು.
ನಿಯೋಗದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಸಂಯುಕ್ತ ಸುನ್ನಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ನೇಜಾರು, ರಫೀಕ್ ಕುಂದಾಪುರ, ಉಡುಪಿ ಜಿಲ್ಲಾ ವಕ್ಫ್ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ನಕ್ವಾ ಯಹ್ಯಾ, ಪ್ರಮುಖರಾದ ರಿಯಾಝ್ ಕೋಡಿ, ಇಸ್ಮಾಯಿಲ್ ಕಟಪಾಡಿ, ಅಮೀರ್ ಹಂಝಾ, ಜಮಾಅತೆ ಇಸ್ಲಾಮಿ ಹಿಂದ್‌ನ ಇಬ್ರಾಹಿಂ ಕಿದೆವರ್ ಹೂಡೆ, ಸಯ್ಯದ್ ಫರೀದ್ ಶೇಖ್, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ, ಸಾಲಿಡಾರಿಟಿ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.