ಲಾರಿ ಢಿಕ್ಕಿ: ಪಾದಚಾರಿ ಮೃತ್ಯು
Update: 2025-06-04 21:08 IST
ಕಾಪು: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಳೂರು ಶ್ರೀಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.3ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮೂಳೂರು ಫಿಶರೀಶ್ ರೋಡ್ನ ನಿವಾಸಿ ಧನಂಜಯ ಸುವರ್ಣ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಧನಂಜಯ ಸುವರ್ಣ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.