×
Ad

ತಮಿಳು ನಟ ಕಮಲ್ ಹಾಸನ್ ವಿರುದ್ಧ ಕರವೇಯಿಂದ ದೂರು

Update: 2025-06-05 19:34 IST

ಉಡುಪಿ, ಜೂ.5: ಇತ್ತೀಚಿಗೆ ತನ್ನ ಥಗ್ ಲೈಫ್ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಂದರ್ಭದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡಿಗರಿಗೆ ಅವಮಾನ ವಾಗುವಂತೆ ಮಾತನಾಡಿದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಿಯೋಗ ಉಡುಪಿ ನಗರ ಠಾಣೆಗೆ ದೂರು ನೀಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಕನ್ನಡ ಭಾಷೆಗೆ ಅವಮಾನ ಮಾಡಿದ ಕಮಲಹಾಸನ್ ಕನ್ನಡಿಗರ ಕ್ಷಮೆ ಯಾಚನೆ ಮಾಡದೆ ಇದ್ದಲ್ಲಿ ಅವರ ಥಗ್ ಲೈಫ್ ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಉಗ್ರವಾದ ಹೋರಾಟವನ್ನು ಎದುರಿಸ ಬೇಕಾದೀತು ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಉಪಾಧ್ಯಕ್ಷ ಅಲ್ಫಾನ್ಸೋ, ಎಂ.ಎಸ್.ಸೈಯ್ಯದ್ ನಿಝಾಮುದ್ದೀನ್, ಮಹಿಳಾ ಜಿಲ್ಲಾಧ್ಯಕ್ಷ ಜ್ಯೋತಿ ಶೇರಿಗಾರ್ ಕಾಪು ತಾಲೂಕು ಅಧ್ಯಕ್ಷ ಚೇತನ್ ಪಡುಬಿದ್ರಿ ಪದಾಧಿಕಾರಿಗಳಾದ ದೇವಕಿ, ಖಾದರ್ ಮಂಚಕಲ್, ಶಾಹಿಲ್ ರಹಮತುಲ್ಲಾ, ನಾಗರಾಜ್ ವಿಜಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News