×
Ad

ಮಲಬಾರ್ ಗೋಲ್ಡ್‌ನಿಂದ ವಿಶ್ವ ಪರಿಸರ ದಿನಾಚರಣೆ

Update: 2025-06-05 19:35 IST

ಉಡುಪಿ, ಜೂ.5: ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ವತಿಯಿಂದ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಶ್ವ ಪರಿಸರ ದಿನವನ್ನು ಇಂದು ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಹಕರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ವ್ಯವಸ್ಥಾಪಕ ಪುರಂದರ ತಿಂಗಳಾಯ, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಅರಣ್ಯ ಇಲಾಖೆ ಮೂಡುಬಿದಿರೆ ಪ್ರಥಮ ದರ್ಜೆ ಸಹಾಯಕ ಅರುಣ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ವಾಸಿಂ ಸಹಕರಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News