×
Ad

ವಿಶ್ವ ಪರಿಸರ ದಿನಾಚರಣೆ: ಬಂಟಕಲ್ಲು ವಿದ್ಯಾರ್ಥಿಗಳಿಂದ ಜಾಥ

Update: 2025-06-05 20:26 IST

ಶಿರ್ವ, ಜೂ.5: ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ ಘಟಕ ಮತ್ತು ಐಐಸಿ ಘಟಕವು ಜಂಟಿ ಆಶ್ಪಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಾಗತಿಕವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕೊನೆಗೊಳಿಸುವುದು ಎಂಬ ವಿಷಯದಲ್ಲಿ ಶಂಕರಪುರ ದಿಂದ ಕಾಲೇಜಿನವರೆಗೆ ಜಾಥವನ್ನು ಗುರುವಾರ ಆಯೋಜಿಸಲಾಗಿತ್ತು.

ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಾ ಅಧಿಕಾರಿ ಡಾ.ರಾಧಕೃಷ್ಣ ಎಸ್.ಐತಾಳ್ ಜಾಥಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿ, ಪರಿಸರ ರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ತುರ್ತು ಅಗತ್ಯತೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಸಾಮೂಹಿಕ ಪ್ರತಿಜ್ಞೆಯನ್ನು ಮಾಡಿದರು.

ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮಾತನಾಡಿದರು. ಕೊನೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಪ್ರತಿಬಿಂಬಿಸುವ ಫಲಕವನ್ನು ಹಿಡಿದು ಜಾಥದಲ್ಲಿ ಪಾಲ್ಗೊಂಡರು. ಜಾಥದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News