×
Ad

ಕಾರು ಢಿಕ್ಕಿ: ಸ್ಕೂಟರ್ ಸವಾರೆ ಸ್ಥಳದಲ್ಲಿಯೇ ಮೃತ್ಯು

Update: 2025-06-05 20:29 IST

ಕಾರ್ಕಳ: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಮೃತಪಟ್ಟ ಘಟನೆ ನಿಟ್ಟೆ ಎನ್.ಎಸ್.ಕಾಂಪ್ಲೆಕ್ಸ್ ಎದುರುಗಡೆ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಜೂ.4ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಯಶವಂತಿ(47) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್‌ನಲ್ಲಿ ಕಾರ್ಕಳದಿಂದ ನಿಟ್ಟೆ ಕಡೆಗೆ ಹೋಗುತ್ತಿದ್ದು, ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ರಸ್ತೆಗೆ ಇಂಡಿಕೇಟರ್ ಹಾಕಿ ತಿರುಗಿಸಿ ಮುಂದೆ ಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರೊಂದು ಓವರ್‌ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಯಶವಂತಿ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿವೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News