×
Ad

ಕೆಎಸ್ಸಾರ್ಟಿಸಿ ವಿದ್ಯಾರ್ಥಿ ಬಸ್‌ಪಾಸ್: ಅರ್ಜಿ ಆಹ್ವಾನ

Update: 2025-06-09 21:52 IST

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ - https://sevasindhuservices.karnataka.gov.in/buspassservices-ನಲ್ಲಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್‌ಪಾಸಿಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್‌ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕ.ರಾ.ರ.ಸಾ.ನಿಗಮದ ವೆಬ್‌ಸೈಟ್ - https://ksrtc.karnataka.gov.in/studentpass-ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿ ಮಾಡಿ ಶಾಲಾ ಅಥವಾ ಕಾಲೇಜು ಮುಖೋಪಾಧ್ಯಾಯರ ಅಥವಾ ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸ ಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕ ವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯ ಬಹುದಾಗಿದೆ.

ರಾಜ್ಯ ಸರಕಾರ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯುವ ಅಗತ್ಯವಿದೆ.

ಕ.ರಾ.ರ.ಸಾ.ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ - https://ksrtc.karnataka.gov.in/studentpass - ನಲ್ಲಿ ಪ್ರಕಟಿಸಲಾಗಿದೆ ಎಂದು ಮಂಗಳೂರು ಕ.ರಾ.ರ.ಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿ ಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News