×
Ad

ಪರಿಸರವು ಅಂತರಂಗದ ಭಾಗವಾಗಬೇಕು: ಗುರುರಾಜ್ ಸನಿಲ್

Update: 2025-06-09 22:45 IST

ಉಡುಪಿ, ಜೂ.9: ಪ್ರಕೃತಿಯ ಕುರಿತಾದ ಮಾನವನ ಅಜ್ಞಾನವು ಹಲವು ಸಮಸ್ಯೆಗಳಿಗೆ ಮೂಲ ಕಾರಣ ವಾಗಿದೆ. ಪ್ರಕೃತಿಯ ನಿರ್ವಹಣೆಯಲ್ಲಿ ಅದರದೇ ಆದ ಒಂದು ಲಯವಿದೆ. ಗಿಡ ಮರಗಳು, ಬೆಟ್ಟಗುಡ್ಡ ಪ್ರಾಣಿ ಪಕ್ಷಿಗಳು ಪ್ರಕೃತಿಗೆ ಪೂರಕವಾಗಿ ವರ್ತಿಸುತ್ತವೆ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಂದರೆ ಪರಿಸರವು ಮನುಷ್ಯನ ಅಂತರಂಗದ ಭಾಗವಾಗಬೇಕಾಗಿದೆ ಎಂದು ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುವ ರೆಡ್‌ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ‘ಪರಿಸರ ಮತ್ತು ಜೀವನ’ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಿದರು.

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ಧ್ಯೇಯ ವಾಕ್ಯ ಪ್ಲಾಸ್ಟಿಕ್ ನಿಮೂರ್ಲನೆಯ ಕುರಿತು ವಿವರಗಳನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಜನ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತು ಗಳನ್ನಾಡಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ರವಿಪ್ರಸಾದ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್, ಯುವ ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯ ಎಂ.ಎಸ್. ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ನಿಕೇತನ ಕಾರ್ಯಕ್ರಮ ನಿರೂಪಿಸಿದರೆ ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News