ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2025-06-10 21:11 IST
ಕೋಟ, ಜೂ.10: ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಐರೋಡಿ ಗ್ರಾಮದ ಕಳುವಿನಕಟ್ಟೆ ಕುಂದಾಪುರ-ಉಡುಪಿ ರಾ.ಹೆ.66ರಲ್ಲಿ ಜೂ.10ರಂದು ಬೆಳಗಿನ ಜಾವ ನಡೆದಿದೆ.
ಕುಂದಾಪುರದಿಂದ ಉಡುಪಿ ಕಡೆ ಹೋಗುತ್ತಿದ್ದ ವಾಹನವೊಂದು ಸುಮಾರು 35 ರಿಂದ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದು, ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿ, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಅಪಘಾತದಿಂದ ಮೃತರ ಮುಖ ಗುರುತು ಸಿಗದ ರೀತಿಯಲ್ಲಿ ಸಂಪೂರ್ಣ ನುಜ್ಜು ನುಜ್ಜಾಗಿದೆ. ಮೃತ ವ್ಯಕ್ತಿಯು ಹಳದಿ ಮತ್ತು ಸಿಮೆಂಟ್ ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.