ನಾಯಿಗೆ ವಿಷ ಉಣಿಸಿ ಕೊಂದ ಪ್ರಕರಣ| ಆರೋಪಿಗಳ ಮಾಹಿತಿ ನೀಡಿದರೆ ನಗದು ಬಹುಮಾನ: ಪೇಟಾ ಘೋಷಣೆ
Update: 2025-06-11 20:58 IST
ಸಾಂದರ್ಭಿಕ ಚಿತ್ರ
ಕಾರ್ಕಳ, ಜೂ.11: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿ ಮರ್ಣೆಯಲ್ಲಿ ನಾಯಿಗೆ ವಿಷ ಹಾಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 50 ಸಾವಿರ ರೂ.ಬಹುಮಾನವನ್ನು ಪೇಟಾ ಸಂಸ್ಥೆ ಘೋಷಣೆ ಮಾಡಿದೆ.
ಜೂ.6ರಂದು ವಿಷ್ಣುಮೂರ್ತಿ ದೇವಸ್ಥಾನ ಪರಿಸರದಲ್ಲಿ ನಾಯಿ ಮೃತಪಟ್ಟ ಸ್ಥಿತಿಯಲ್ಲಿದ್ದು, ಮರೋಣತ್ತರ ಪರೀಕ್ಷೆಯಲ್ಲಿ ನಾಯಿಗೆ ವಿಷ ಉಣಿಸಿರುವುದು ದೃಢಪಟ್ಟಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳ ಶೋಧ ಕಾರ್ಯ ಮುಂದುವರೆಸಿದ್ದಾರೆ.
ನಾಯಿಗೆ ವಿಷ ಉಣಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದಲ್ಲಿ 50 ಸಾವಿರ ಬಹುಮಾನವನ್ನು ಪೆಟಾ ಸಂಸ್ಥೆಯು ಘೋಷಿಸಿದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.