×
Ad

ಲಿಖಿತ ಪರೀಕ್ಷೆ: ಪ್ರತಿಬಂಧಕಾಜ್ಞೆ ಜಾರಿ

Update: 2025-06-12 20:55 IST

ಉಡುಪಿ, ಜೂ.12: ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜೂನ್ 15ರಿಂದ 17ರವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಈ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಜೂನ್ 15ರಿಂದ 17ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News