ಉಡುಪಿ ಜಿಲ್ಲಾ ವಾಪ್ತಿಯ ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
Update: 2025-06-12 20:57 IST
ಉಡುಪಿ, ಜೂ.12: ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಜಿಲ್ಲೆಯಲ್ಲಿರುವ ಒಟ್ಟು 50 ದ್ವೀಪಗಳಿಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223ರಂತೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.