ಯಶೋ ಮಾಧ್ಯಮ ಪ್ರಶಸ್ತಿಗೆ ಕಿರಣ್ ಮಂಜನಬೈಲು ಆಯ್ಕೆ
Update: 2025-06-13 18:38 IST
ಉಡುಪಿ, ಜೂ.13: ಬೆಂಗಳೂರಿನ ಸ್ಪಂದನಾ ಸೇವಾ ಸಂಸ್ಥೆಯಿಂದ ಉಡುಪಿ ಜಿಲ್ಲೆಯ ಪತ್ರಕರ್ತರ ಸಾಧನೆ ಗುರುತಿಸಿ ಕೊಡಲ್ಪಡುವ ಯಶೋ ಮಾಧ್ಯಮ- 2025 ಪ್ರಶಸ್ತಿಗೆ ಉಡುಪಿಯ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಕಿರಣ್ ಮಂಜನಬೈಲು ಆಯ್ಕೆಯಾಗಿದ್ದಾರೆ.
ಜೂ.14ರಂದು ಬೆಳಿಗ್ಗೆ 10 ಗಂಟೆಗೆ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳಿಗೆ ನೀಡುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾ ಗುವುದು. ಅಧ್ಯಕ್ಷತೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.