ಅಹ್ಮದಾಬಾದ್ ವಿಮಾನ ದುರಂತ: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ವಿಷಾದ
Update: 2025-06-13 20:10 IST
ಉಡುಪಿ, ಜೂ.13: ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಎಲ್ಲರ ಬಗ್ಗೆ ಕನಿಕರವಿದ್ದು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ.
ಸರಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಇಂತಹ ದುರಂತಗಳು ಸಂಭವಿಸು ವುದಕ್ಕಿಂತ ಮುಂಚೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ದುರಂತಗಳು ಸಂಭವಿಸದಂತೆ ನೋಡಿಕೊಳ್ಳಬೇಕಾಗಿದೆ ಹಾಗೂ ಇಡೀ ದೇಶ ಮೃತಪಟ್ಟವರ ಕುಟುಂಬ ದೊಂದಿಗೆ ನಿಲ್ಲಬೇಕು. ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪರಿಹಾರ ಹಾಗೂ ಸರಕಾರದಿಂದ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಬೇಕು ಎಂದು ಸಮಿತಿ ಪ್ರಕಟಣೆಯಲ್ಲಿ ಆಗ್ರಹಿಸಿದೆ.