ಪತ್ರಕರ್ತ ಕಿರಣ್ ಮಂಜನಬೈಲುಗೆ ಯಶೋ ಮಾಧ್ಯಮ ಪ್ರಶಸ್ತಿ ಪ್ರದಾನ
ಉಡುಪಿ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವಂಥ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಅನಂತಪದ್ಮನಾಭ ಕಿಣಿ ಹೇಳಿದ್ದಾರೆ.
ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸ್ಪಂದನಾ ಸೇವಾ ಸಂಸ್ಥೆ ವತಿಯಿಂದ ನೀಡಿದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ, ಸಂಯುಕ್ತ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ಕಿರಣ್ ಮಂಜನಬೈಲು ಅವರಿಗೆ ಯಶೋ ಮಾಧ್ಯಮ-2025 ಪ್ರಶಸ್ತಿ ವಿತರಿಸಿ ಅವರು ಮಾತನಾಡುತಿದ್ದರು.
ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಉಡುಪಿ ಇಂಡಿಯನ್ ಮೆಡಿಕಲ್ ಅಸೋಸಿ ಯೇಷನ್‌ನ ಮಾಜಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಡಾ.ಮರಿಯಾ ಪಾಯಸ್, ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್‌ನ ಮುಖ್ಯಸ್ಥ ಹಫೀಝ್ ರೆಹಮಾನ್ ಮಾತನಾಡಿದರು.
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಸಂಯೋಜಕ ಸುಬ್ರಹ್ಮಣ್ಯ ಕಾರಂತ್, ಸುಮನ ಎಸ್.ಪೈ, ರಜನಿ.ವಿ.ಪೈ, ಸ್ಪಂದನಾ, ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್, ಶಾಲೆಯ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪೈ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕಾಮತ್ ವಂದಿಸಿದರು.