×
Ad

ಡಾ.ಆರ್.ಗಣೇಶ್‌ಗೆ ಯಕ್ಷಗಾನ ಪ್ರಶಸ್ತಿ

Update: 2025-06-17 21:18 IST

ಉಡುಪಿ, ಜೂ.17: ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ನಾಡಿನ ಹಿರಿಯ ಬಹುಶ್ರುತ ವಿದ್ವಾಂಸ, ಹಲವು ಗ್ರಂಥಗಳನ್ನು ಸಾರಸ್ವತ ಲೋಕಕ್ಕೆ ನೀಡಿರುವ ಶತಾವಧಾನಿ ಡಾ.ಆರ್. ಗಣೇಶ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 4ರಂದು ಶುಕ್ರವಾರ ಸಂಜೆ 4 ಗಂಟೆಗೆ ಸಂಸ್ಥೆಯ ಐ.ವೈ.ಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ಈ ಪ್ರಶಸ್ತಿಯು ರೂ.60,000 ನಗದು ಪುರಸ್ಕಾರವನ್ನು ಒಳಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News