×
Ad

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ

Update: 2025-06-17 22:06 IST

ವಿದ್ಯಾಕುಮಾರಿ ಕೆ. - ಸ್ವರೂಪ ಟಿ.ಕೆ

ಉಡುಪಿ: ಸದ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ ವರ್ಗಾಯಿಸಿದೆ. ಹಾಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.

2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News