×
Ad

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಚಾಲನೆ

Update: 2025-06-18 20:12 IST

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಆರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್- 2025ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಲಾಯಿತು.

ನೋಂದಣಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದ ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, 2000ರಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. ಇದು 25 ವರ್ಷಗಳಲ್ಲಿ ಕೋಟ್ಯಂತರ ಫಲಾನುಭವಿ ಗಳ ಜೀವನವನ್ನು ಮುಟ್ಟಿದೆ. 2000ರಲ್ಲಿ 3200 ಕುಟುಂಬಗಳು ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದು, ಕಳೆದ ವರ್ಷ 1.25 ಲಕ್ಷ ಕುಟುಂಬಗಳು ಈ ಯೋಜನೆಗಳ ಅಡಿಯಲ್ಲಿ ನೋಂದಣಿ ಮಾಡಿಕೊಂಡಿದೆ. ಒಟ್ಟು 6.72 ಲಕ್ಷ ಫಲಾನುಭವಿಗಳಿದ್ದಾರೆ ಎಂದರು.

ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡಲಾಗುತ್ತಿದೆ. ಕಾರ್ಡ್‌ದಾರರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಮಂಗಳೂರು ಮತ್ತು ಅತ್ತಾವರದ ಕೆಎಂಸಿ ಆಸ್ಪತ್ರೆಗಳು, ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ, ಗೋವಾದ ಮಣಿಪಾಲ ಆಸ್ಪತ್ರೆ ಮತ್ತು ಮಣಿಪಾಲ ಮತ್ತು ಮಂಗಳೂರಿನ ದಂತ ಮತ್ತು ಆಯುರ್ವೇದ ಆಸ್ಪತ್ರೆಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು ಎಂದರು.

ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್(ಡಾ)ಎಂ.ಡಿ.ವೆಂಕಟೇಶ್, ಉಪಕುಲಪತಿ ಡಾ.ಶರತ್ ಕೆ.ರಾವ್, ಮಣಿಪಾಲದ ಕೆಎಂಸಿ ಡೀನ್ ಡಾ. ಅನಿಲ್ ಕೆ ಭಟ್, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ.ಆನಂದ್ ವೇಣುಗೋಪಾಲ್ ಉಪಸ್ಥಿತರಿದ್ದರು.

ಆನ್‌ಲೈನ್ ಪೋರ್ಟಲ್ www.manipalhealthcard.com ಮೂಲಕ ಸ್ವಯಂ ನೋಂದಣಿ ಮಾಡಬ ಹುದು ಹೆಚ್ಚಿನ ವಿವರಗಳಿಗಾಗಿ, 9980854700 ಅಥವಾ 0820-2923748ಗೆ ಕರೆ ಮಾಡಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News