×
Ad

ಸಚಿವೆ ಹೆಬ್ಬಾಳ್ಕರ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನಿವಾಸಕ್ಕೆ ಭೇಟಿ

Update: 2025-06-21 19:39 IST

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರತಾಪಚಂದ್ರ ಶೆಟ್ಟಿಯವರಿಂದ ಮಾಹಿತಿ ಪಡೆದರು. ಜಿಲ್ಲೆಯ ಸಮಸ್ಯೆ ಕುರಿತು ಮತ್ತು ರಾಜಕೀಯ ಸಲಹೆ ಮಾರ್ಗದರ್ಶನ ನೀಡಬೇಕೆಂದು ಸಚಿವರು ವಿನಂತಿಸಿದರು.

ಖಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ, ಮುಖಂಡರಾದ ಮುನಿಯಾಲು ಉದಯ ಶೆಟ್ಟಿ, ಬೆಳ್ಟೆ ಸತೀಶ ಕಿಣಿ, ಹಾಲಾಡಿ ಗ್ರಾಪಂ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News