ಕಾಪುವಿನಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ
Update: 2025-06-21 21:21 IST
ಉಡುಪಿ, ಜೂ.21: ಕಾಪು ತಾಲೂಕು ಆಡಳಿತ ಕಚೇರಿ ಆವರಣದ ಎದುರಿನಲ್ಲಿ ನೂತನವಾಗಿ ರ್ನಿುಸಲಾಗಿರುವ ಇಂದಿರಾ ಕ್ಯಾಂಟೀನ್‌ನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಇಂದು ಸಂಜೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಸಿಇಓ ಪ್ರತೀಕ್ ಬಾಯಲ್, ತಹಶೀಲ್ದಾರ್ ಪ್ರತಿಭಾ, ಎಂ.ಎ. ಗಫೂರ್ ಹಾಗೂ ಇತರರು ಉಪಸ್ಥಿತರಿದ್ದರು.