ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2025-06-22 20:22 IST
ಅಜೆಕಾರು, ಜೂ.22: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಅಜೆಕಾರಿನ ಬೊಳ್ಳ ನಿವಾಸಿ ಗೀತಾ(52) ಎಂಬವರು ಜೂ.20ರಂದು ರಾತ್ರಿ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಕಳದ ನಜೀರ್ ಅಹಮ್ಮದ್ ಶೇಖ್(58) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.21ರಂದು ಮನೆಯ ಬಳಿಯ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.